ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Update: 2025-04-04 19:28 IST
ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಲೋಕಸಭೆ | PC : PTI

  • whatsapp icon

ಹೊಸದಿಲ್ಲಿ: ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಹಾಗೂ ರಾಜ್ಯ ಸಭೆಯ ಕಲಾಪವನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದರೊಂದಿಗೆ ಜನವರಿ 31ರಂದು ಆರಂಭವಾದ ಬಜೆಟ್ ಅಧಿವೇಶನ ಮುಕ್ತಾಯಗೊಂಡಿದೆ.

ಲೋಕಸಭೆಯ ದಿನದ ಸಭೆ ಸೇರಿದ ತಕ್ಷಣ ಸರಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿರುವುದಕ್ಕೆ ಸಂಬಂಧಿಸಿ ಆಡಳಿತಾರೂಢ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದರು. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಧ್ಯಾಹ್ನ 12 ಗಂಟೆ ವರೆಗೆ ಮುಂದೂಡಿದರು. ಮತ್ತೆ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಈ ಅಧಿವೇಶನದ ಸಂದರ್ಭ 16ಕ್ಕೂ ಅಧಿಕ ಮಸೂದೆಗಳನ್ನು ಅಂಗೀಕರಿಸಲಾಗಿದೆ ಹಾಗೂ ಸದನ ಶೇ. 118ಕ್ಕೂ ಅಧಿಕ ಉತ್ಪಾದಕತೆಯನ್ನು ಸಾಧಿಸಿತ್ತು ಎಂದು ಅವರು ಹೇಳಿದರು.

ರಾಜ್ಯ ಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಜಗದೀಪ್ ಧನ್ಕರ್ ಅವರಿಗೆ ಜನ್ಮ ದಿನದ ಶುಭಾಶಯ ಕೋರಲಾಯಿತು. ಬಳಿಕ ಪಶ್ಚಿಮಬಂಗಾಳದಲ್ಲಿ 25,700ಕ್ಕೂ ಅಧಿಕ ಭೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಅಮಾನ್ಯಗೊಳಿಸಿದ ಹಿನ್ನೆಲೆಯಲ್ಲಿ ತೀವ್ರ ಗದ್ದಲ ಉಂಟಾಗಿ ಕಲಾಪವನ್ನು ಎರಡನೇ ಬಾರಿ ಅಪರಾಹ್ನ 1 ಗಂಟೆ ವರೆಗೆ ಮುಂದೂಡಲಾಯಿತು.

ಮತ್ತೆ ಕಲಾಪ ಆರಂಭವಾದಾಗ ಧನ್ಕರ್ ಅವರು ಸೋನಿಯಾ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಇದು ಸಂಸದೀಯ ಪ್ರಕ್ರಿಯೆಯ ವಿಶ್ವಾಸರ್ಹಾತೆ ಹಾಗೂ ಘನತೆಯನ್ನು ಹಾಳು ಮಾಡುತ್ತದೆ ಎಂದರು. ಈ ಹೇಳಿಕೆಗೆ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಲು ಆರಂಭಿಸಿದರು. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಧನ್ಕರ್ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News