ಮಧ್ಯಪ್ರದೇಶ: ಕಾಲೇಜಿನಲ್ಲಿ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನದ ವಿರುದ್ಧ ಎಬಿವಿಪಿ ಪ್ರತಿಭಟನೆ

Update: 2024-09-26 09:52 GMT

PC : scroll.in

ಇಂದೋರ್: ಮಧ್ಯಪ್ರದೇಶದ ಇಂದೋರ್ ಕಾಲೇಜಿನಲ್ಲಿ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನದ ವಿರುದ್ಧ ಸಂಘ ಪರಿವಾರದ ಸಹ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳವಾರ ಪ್ರತಿಭಟನೆ ನಡೆಸಿದೆ ಎಂದು The Indian Express ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಿಜೆಪಿಯ ಮಾತೃ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ಘಟಕವಾಗಿದೆ.

“ಶಿಕ್ಷಣದ ದೇಗುಲಗಳನ್ನು ರಾಜಕೀಯದ ಅಂಗಳವಾಗಿ ಪರಿವರ್ತಿಸಬಾರದು” ಎಂದು ಸರಕಾರಿ ಹೋಳ್ಕರ್ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು ಎಂದು ವರದಿಯಾಗಿದೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿರುವ ಇಂದೋರ್-3 ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಕೇಶ್ ಶುಕ್ಲಾ, ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ.

ಆದರೆ, ಎಬಿವಿಪಿ ಸಮ್ಮತಿಯಿಲ್ಲದೆ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ಸುರೇಶ್ ಟಿ.ಸಿಲಾವತ್ ಘೋಷಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News