ಮಹಾರಾಷ್ಟ್ರ | ಪಟಾಕಿ ಸಿಡಿಸುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು
Update: 2024-11-03 16:21 GMT
ಪುಣೆ : ಪುಣೆಯ ಪಿಂಪ್ರಿ ಚಿಂಚ್ವಾಡ ಪ್ರದೇಶದಲ್ಲಿ ಪಟಾಕಿ ಸಿಡಿಸುತ್ತಿದ್ದ ಸಂದರ್ಭ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಸೋಹಂ ಪಟೇಲ್ ಎಂದು ಗುರುತಿಸಲಾಗಿದೆ. ರಾವೇತ ಪ್ರದೇಶದಲ್ಲಿ ನವೆಂಬರ್ 1ರಂದು ನಡೆದ ಈ ಅಪಘಾತದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
‘‘ದೀಪಾವಳಿಯ ಮುನ್ನಾ ದಿನ ಸೋಹಂ ಪಟೇಲ್ ಅವರು ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಈ ಸಂದರ್ಭ ವೇಗವಾಗಿ ಬಂದ ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರು ಮೃತಪಟ್ಟರು’’ ಎಂದು ರಾವೇತ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘‘ಘಟನೆಯ ಕುರಿತ ಸಿಸಿಟಿವಿ ದೃಶ್ಯಾವಳಿಯನ್ನು ನಾವು ಸಂಗ್ರಹಿಸಿದ್ದೇವೆ. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ’’ ಎಂದು ಅವರು ತಿಳಿಸಿದ್ದಾರೆ.