ಮಹಾರಾಷ್ಟ್ರ ಎಟಿಎಸ್ ನಿಂದ 9 ಮಂದಿ ಬಾಂಗ್ಲಾದೇಶಿಯರ ಬಂಧನ

Update: 2025-01-01 06:34 GMT

ಸಾಂದರ್ಭಿಕ ಚಿತ್ರ 

ಮುಂಬೈ: ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ದೇಶದಲ್ಲಿ ತಂಗಿದ್ದ 9 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದಲ್ಲದೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ 19 ಪ್ರಕರಣಗಳಲ್ಲಿ 43 ಬಾಂಗ್ಲಾದೇಶಿ ಪ್ರಜೆಗಳನ್ನು ಎಟಿಎಸ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಮುಂಬೈ, ನಾಸಿಕ್, ನಾಂದೇಡ್ ಮತ್ತು ಛತ್ರಪತಿ ಸಂಭಾಜಿ ನಗರದಲ್ಲಿ ಸ್ಥಳೀಯ ಪೊಲೀಸರು ಕಾರ್ಯಚರಣೆಯನ್ನು ನಡೆಸಿ ಎಂಟು ಪುರುಷರು ಮತ್ತು ಓರ್ವ ಮಹಿಳೆ ಸೇರಿದಂತೆ 9 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

ಆರೋಪಿಗಳು ನಕಲಿ ದಾಖಲೆಗಳನ್ನು ಬಳಸಿ ಆಧಾರ್ ಕಾರ್ಡ್ ಪಡೆದಿದ್ದಾರೆ. ಪೊಲೀಸರು ವಿವಿಧ ನಿಬಂಧನೆಗಳಡಿಯಲ್ಲಿ ಅವರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News