"ನಾನು ರಾಜೀನಾಮೆ ನೀಡಿಲ್ಲ": ಮಾಧ್ಯಮಗಳ ವರದಿ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಸ್ಪಷ್ಟನೆ
ಮುಂಬೈ: ಮಹಾರಾಷ್ಟ್ರಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಯನ್ನು ನಾನಾ ಪಟೋಲೆ ನಿರಾಕರಿಸಿದ್ದು, ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದೇನೆ, ಆದರೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಹೀನಾಯ ಸೋಲಿನ ನಂತರ, ಸೋಲಿನ ನೈತಿಕ ಹೊಣೆ ಹೊತ್ತು ನಾನಾ ಪಟೋಲೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಪಟೋಲೆ ಅವರು ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದು, ರಾಜೀನಾಮೆ ನೀಡಿರುವ ಬಗ್ಗೆ ಕಾಂಗ್ರೆಸ್ ಪಕ್ಷವು ಯಾವುದೇ ಅಧಿಕೃತ ಹೇಳಿಕೆಯನ್ನು ಹೊರಡಿಸಿಲ್ಲ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಕ್ಷ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಿತ್ತು. ಎಂವಿಎ ಭಾಗವಾಗಿ ಸ್ಪರ್ಧಿಸಿದ್ದ 101 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದಲ್ಲದೆ ನಾನಾ ಪಟೋಲೆ ಸಾಕೋಲಿ ವಿಧಾನಸಭಾ ಕ್ಷೇತ್ರದಲ್ಲಿ 208 ಮತಗಳ ಅಲ್ಪ ಅಂತರದ ಗೆಲುವನ್ನು ದಾಖಲಿಸಿದ್ದರು.