ಮಹಾರಾಷ್ಟ್ರ: 2,000 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ

Update: 2024-02-21 15:46 GMT

ಸಾಂದರ್ಭಿಕ ಚಿತ್ರ

ಮುಂಬೈ: ಪುಣೆ ಹಾಗೂ ದಿಲ್ಲಿಯಲ್ಲಿ ದಾಳಿ ನಡೆಸಿರುವ ಮುಂಬೈ ಪೊಲೀಸರು 2,000 ಕೋಟಿ ರೂ. ಮೌಲ್ಯದ 1,100 ಕಿ.ಗ್ರಾಂ. ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ ಹಾಗೂ ಇದಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತರ ಇಬ್ಬರನ್ನು ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಹೊರವಲಯದ ಕುರ್ಕುಂಬ್ ಎಂಐಡಿಸಿ ಪ್ರದೇಶದಲ್ಲಿ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿರುವುದು ಸೇರಿದಂತೆ ಪುಣೆ ಜಿಲ್ಲೆಯ ವಿವಿಧ ಸ್ಥಳಗಳಿಂದ 700 ಕಿ.ಗ್ರಾಂ. ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅನಂತರ ಮೂವರನ್ನು ರವಿವಾರ ಬಂಧಿಸಲಾಗಿದೆ. ಅವರ ವಿಚಾರಣೆ ನಡೆಯುತ್ತಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಆರೋಪಿಗಳು ನೀಡಿದ ಮಾಹಿತಿ ಆಧಾರದಲ್ಲಿ ಪುಣೆ ಪೊಲೀಸರು ಮಂಗಳವಾರ ಸಂಜೆ ದಕ್ಷಿಣ ದಿಲ್ಲಿಯ ಎರಡು ಗೋದಾಮಿನಂತಹ ಕಟ್ಟಡಗಳಿಂದ ಇನ್ನೂ 400 ಕಿ.ಗ್ರಾಂ. ಮಾದಕದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ವಶಪಡಿಸಿಕೊಳ್ಳಲಾದ ಒಟ್ಟು ಮಾದಕ ದ್ರವ್ಯದ ಪ್ರಮಾಣ 1,100 ಕಿ.ಗ್ರಾಂ.ಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಾದಕ ದ್ರವ್ಯದ ಅಂದಾಜು ಮೌಲ್ಯ 2,000 ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News