ಕಾಂಗ್ರೆಸ್‌ ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್‌ ಗಾಂಧಿ ಆಯ್ಕೆ ಸಾಧ್ಯತೆ: ಶಶಿ ತರೂರ್‌

Update: 2023-10-17 13:47 IST
ಕಾಂಗ್ರೆಸ್‌ ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್‌ ಗಾಂಧಿ ಆಯ್ಕೆ ಸಾಧ್ಯತೆ: ಶಶಿ ತರೂರ್‌

ಶಶಿ ತರೂರ್‌ (PTI)

  • whatsapp icon

ತಿರುವನಂತಪುರಂ: 2024ರ ಲೋಕಸಭೆ ಚುನಾವಣೆಯಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟ ಇರುವುದರಿಂದ ಅಚ್ಚರಿಯ ಫಲಿತಾಂಶ ಬರಬಹುದು, ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಮಣಿಸಿ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ತರೂರ್ ಹೇಳಿದರು.

"ಆದ್ದರಿಂದ ನಾವು ಕಾದು ನೋಡಬೇಕು" ಎಂದು ಅವರು US ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್ D2C ಮಾರುಕಟ್ಟೆ ವೇ ವೃತ್ತಿಪರರೊಂದಿಗೆ ನಡೆಸಿದ ಸಂವಾದದಲ್ಲಿ ಹೇಳಿದರು.

ಚುನಾವಣೋತ್ತರ ಸನ್ನಿವೇಶದ ಕುರಿತು ಮಾತನಾಡಿದ ಅವರು, ''ಒಮ್ಮೆ ಫಲಿತಾಂಶ ಬಂದರೆ, ಅದು ಒಂದು ಪಕ್ಷವಲ್ಲದ ಸಮ್ಮಿಶ್ರ ಬಣವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರೂ ಆರಿಸಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್ ಪಕ್ಷದಿಂದ, ಅದು ಭಾರತದ ಮೊದಲ ದಲಿತ ಪ್ರಧಾನಿಯಾಗಲಿರುವ ಖರ್ಗೆ ಅಥವಾ ರಾಹುಲ್ ಗಾಂಧಿ ಆಗಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News