ಮಹಾಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

Update: 2025-02-18 17:07 IST
Mamata Banerjee

 ಸಿಎಂ ಮಮತಾ ಬ್ಯಾನರ್ಜಿ | PTI 

  • whatsapp icon

ಕೋಲ್ಕತ್ತಾ : ಮಹಾಕುಂಭವು ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿನ ಅವ್ಯವಸ್ಥೆ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಸರಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರಕಾರ ಮಹಾ ಕುಂಭಮೇಳವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಉತ್ತರ ಪ್ರದೇಶ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಅವರು ಯಾವುದೇ ಯೋಜನೆ ರೂಪಿಸಿಲ್ಲ. ಶ್ರೀಮಂತರು, ವಿಐಪಿಗಳಿಗೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News