ದಿಲ್ಲಿ-ಚೆನ್ನೈ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ: ಆರೋಪಿಯ ಬಂಧನ

Update: 2024-10-11 06:23 GMT

ಸಾಂದರ್ಭಿಕ ಚಿತ್ರ (PTI)

ಚೆನ್ನೈ: ದಿಲ್ಲಿ-ಚೆನ್ನೈ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ರಾಜೇಶ್ ಶರ್ಮಾ(45) ಬಂಧಿತ ಆರೋಪಿಯಾಗಿದ್ದಾನೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಆರೋಪಿಯನ್ನು ಬಂಧಿಸಲಾಗಿದೆ.

ಜೈಪುರ ಮತ್ತು ದಿಲ್ಲಿ ಪ್ರವಾಸ ಮುಗಿಸಿ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮನೆಗೆ ವಾಪಾಸ್ಸಾಗುತ್ತಿದ್ದಾಗ ತನ್ನ ಹಿಂದಿನ ಸೀಟ್ ನಲ್ಲಿ ಕುಳಿತುಕೊಂಡಿದ್ದ ಆರೋಪಿ ತನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಕುರಿತು ಸ್ಥಳೀಯ ಪೊಲೀಸರು ಮಹಿಳೆಯಿಂದ ಲಿಖಿತ ದೂರನ್ನು ಪಡೆದುಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಕುರಿತು ಇಂಡಿಗೋ ಏರ್ ಲೈನ್ಸ್ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News