ದಿಲ್ಲಿಯಲ್ಲಿ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಕೊಲೆ
Update: 2024-12-04 07:23 GMT
ಹೊಸದಿಲ್ಲಿ: ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ದಿಲ್ಲಿಯ ನೆಬ್ ಸರಾಯ್ ನಲ್ಲಿ ನಡೆದಿದ್ದು, ಈ ಕುರಿತು ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೃತರನ್ನು ರಾಜೇಶ್ (53), ಪತ್ನಿ ಕೋಮಲ್ (47) ಮತ್ತು ಮಗಳು ಕವಿತಾ(23) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ರಾಜೇಶ್ ಅವರ ಪುತ್ರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮನೆಯಿಂದ ವಾಕಿಂಗ್ ಗೆ ತೆರಳಿದ್ದರು. ವಾಕಿಂಗ್ ಮುಗಿಸಿ ಅವರು ಮನೆಗೆ ಬಂದಾಗ ತಂದೆ, ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವುದನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ತೆರಳಿ ನಡೆಸಿದ್ದು, ಸಿಸಿಟಿವಿ ದೃಶ್ಯಗಳನ್ನು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ದರೋಡೆ, ಕೌಟುಂಬಿಕ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.