ಮಣಿಪುರ: ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯೋಧ

Update: 2024-01-24 09:46 GMT

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಕನಿಷ್ಠ ಆರು ಮಂದಿ ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯು ಸಾಜಿಕ್ ತಂಪಕ್ ಪ್ರದೇಶದಲ್ಲಿ ನಡೆದಿದ್ದು, ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನ ಸಹ ಯೋಧರ ಮೇಲೆ ಗುಂಡು ಹಾರಿಸಿದ್ದಾನೆ. ಇದಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಸಹೋದ್ಯೋಗಿಗಳಿಗೆ ಗುಂಡಿಕ್ಕಿದ ನಂತರ, ಆ ಯೋಧನು ತನಗೆ ತಾನೇ ಗುಂಡಿಟ್ಟುಕೊಂಡು ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಈ ಘಟನೆಯ ಕುರಿತು ಸಾರ್ವಜನಿಕ ಪ್ರಕಟಣೆ ಬಿಡುಗಡೆ ಮಾಡಿರುವ ಮಣಿಪುರ ಪೊಲೀಸರು, ಈ ಘಟನೆಯನ್ನು ಸದ್ಯ ನಡೆಯುತ್ತಿರುವ ಮಣಿಪುರ ಹಿಂಸಾಚಾರದೊಂದಿಗೆ ತಳುಕು ಹಾಕಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News