ವಿದ್ಯಾರ್ಥಿ ನಿಲಯದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪ: ತೆಲಂಗಾಣ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Update: 2025-01-02 13:32 IST
ವಿದ್ಯಾರ್ಥಿ ನಿಲಯದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪ: ತೆಲಂಗಾಣ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Screengrab:X/@jsuryareddy

  • whatsapp icon

ಹೈದರಾಬಾದ್: ನಾವು ಶೌಚಾಲಯದಲ್ಲಿರುವ ವಿಡಿಯೊವನ್ನು ವಿದ್ಯಾರ್ಥಿ ನಿಲಯದ ಅಡುಗೆ ಸಿಬ್ಬಂದಿಗಳು ಗೋಪ್ಯವಾಗಿ ಚಿತ್ರೀಕರಿಸಿಕೊಂಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಮೇಡ್ಚಲ್ ಜಿಲ್ಲೆಯ ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

“ನಮಗೆ ನ್ಯಾಯ ಬೇಕು” ಎಂದು ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಪಾಲ್ಗೊಂಡ ವಿದ್ಯಾರ್ಥಿ ಸಂಘಟನೆಗಳು, ಅವರಿಗೆ ಬೆಂಬಲ ಸೂಚಿಸಿದವು.

ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವ ಸ್ಥಳೀಯ ಪೊಲೀಸರು, ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಘಟನೆಯ ಕುರಿತು ಆಳವಾದ ತನಿಖೆ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News