ರಜನಿಕಾಂತ್‌ ಅಭಿಮಾನಿಗಳ ಸಂಘದ ಸದಸ್ಯರು ಬಿಜೆಪಿಗೆ ಸೇರ್ಪಡೆ

Update: 2024-03-11 16:22 GMT

ಕೆ.ಅಣ್ಣಾಮಲೈ , ರಜನಿಕಾಂತ್‌ | Photo: PTI 

ಚೆನ್ನೈ: ನಟ ರಜನಿಕಾಂತ್‌ ಅಭಿಮಾನಿಗಳ ಸಂಘದ ಕೆಲವು ಸದಸ್ಯರು ಸೋಮವಾರ ಇಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರ ಉಪಸ್ಥಿತಿಯಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಅಣ್ಣಾಮಲೈ ಮತ್ತು ಪಕ್ಷದ ಹಿರಿಯ ನಾಯಕ ಎಚ್.ರಾಜಾ ಬಿಜೆಪಿ ಶಾಲುಗಳನ್ನು ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇಂದು ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಗೆ ಮುನ್ನ ಈ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಚುನಾವಣೆಗಾಗಿ ಮೈತ್ರಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎನ್ನಲಾಗಿದೆ.

ಬಿಜೆಪಿಯು ರಾಜ್ಯದಲ್ಲಿ ತನ್ನ ನೇತೃತ್ವದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆಯೇತರ ಮೈತ್ರಿಕೂಟವನ್ನು ರಚಿಸಲು ಪ್ರಯತ್ನಿಸುತ್ತಿದೆ. ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರ ತಮಿಳು ಮಾನಿಲ ಕಾಂಗ್ರೆಸ್ ಈಗಾಗಲೇ ಬಿಜೆಪಿಯೊಂದಿಗೆ ಕೈಜೋಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News