ಹಣ ಅಕ್ರಮ ವರ್ಗಾವಣೆ ಪ್ರಕರಣ ; ಫಾರೂಕ್ ಅಬ್ದುಲ್ಲಾಗೆ ಈಡಿ ಸಮನ್ಸ್
Update: 2024-02-12 16:42 GMT
ಹೊಸದಿಲ್ಲಿ : ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಹಾಗೂ ಕಾಶ್ಮೀರದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಸೋಮವಾರ ಮತ್ತೆ ಸಮನ್ಸ್ ನೀಡಿದೆ.
ಲೋಕಸಭೆಯಲ್ಲಿ ಶ್ರೀನಗರವನ್ನು ಪ್ರತಿನಿಧಿಸುತ್ತಿರುವ 86ರ ಹರೆಯದ ಫಾರೂಕ್ ಅಬ್ದುಲ್ಲಾ ಅವರಿಗೆ ಇದೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಆದರೆ, ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಅವರು ಶ್ರೀನಗರದಲ್ಲಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ.