ಈಡಿ ಮುಂದೆ ಹಾಜರಾದ ಮುಹಮ್ಮದ್ ಅಝರುದ್ದೀನ್

Update: 2024-10-08 14:46 GMT

ಮುಹಮ್ಮದ್ ಅಝರುದ್ದೀನ್ | PCC : NDTV 

ಹೈದರಾಬಾದ್ : ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಹಾಗೂ ಕಾಂಗ್ರೆಸ್ ನಾಯಕ ಮುಹಮ್ಮದ್ ಅಝರುದ್ದೀನ್ ಮಂಗಳವಾರ ಜಾರಿ ನಿರ್ದೇಶನಾಲಯದ (ಈಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಅಝರುದ್ದೀನ್ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ 3ರಂದು ತನ್ನ ಮುಂದೆ ಹಾಜರಾಗುವಂತೆ ಅಝರುದ್ದೀನ್ ಅವರಿಗೆ ಜಾರಿ ನಿರ್ದೇಶನಾಲಯ ಸೂಚಿಸಿತ್ತು. ಆದರೆ, ಅಝರುದ್ದೀನ್ ಅವರು ನೋಟಿಸನ್ನು ಮುಂದೂಡುವಂತೆ ಕೋರಿದ್ದರು. ಅಲ್ಲದೆ, ಹೊಸ ದಿನಾಂಕ ನೀಡುವಂತೆ ಮನವಿ ಮಾಡಿದ್ದರು.

ಅನಂತರ ಜಾರಿ ನಿರ್ದೇಶನಾಲಯ ಅಕ್ಟೋಬರ್ 8ರಂದು ಹಾಜರಾಗುವಂತೆ ಅಝರುದ್ದೀನ್ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿತ್ತು.

ಅಝರುದ್ದೀನ್ ಅವರು ಫತೇಹ್ ಮೈದಾನ್ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಪೂರ್ವಾಹ್ನ 11 ಗಂಟೆಗೆ ಹಾಜರಾದರು. ಅವರ ಜೊತೆಗೆ ಅವರ ಕಾನೂನು ಸಲಹೆಗಾರರ ತಂಡ ಕೂಡ ಇತ್ತು.

ಈ ತನಿಖೆ ಹೈದರಾಬಾದ್ ಕ್ರಿಕೆಟ್ ಅಸೋಶಿಯೇಸನ್ (ಎಚ್‌ಸಿಎ)ನಲ್ಲಿ ಹಣಕಾಸು ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದೆ. ಈ ಅವ್ಯವಹಾರಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಕಳೆದ ವರ್ಷ ನವೆಂಬರ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News