ನಾಗಾಲ್ಯಾಂಡ್ ಕಲ್ಲಿದ್ದಲು ಗಣಿಯಲ್ಲಿ ಬೆಂಕಿ ; ಆರು ಮಂದಿ ಸುಟ್ಟು ಕರಕಲು, ನಾಲ್ಕು ಮಂದಿಗೆ ಗಾಯ

Update: 2024-01-26 14:33 GMT

ಸಾಂದರ್ಭಿಕ ಚಿತ್ರ, Photo: NDTV


ಗುವಾಹಟಿ: ಕಲ್ಲಿದ್ದಲು ಗಣಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಆರು ಮಂದಿ ಸುಟ್ಟು ಕರಕಲಾಗಿ, ನಾಲ್ವರು ಗಾಯಗೊಂಡಿರುವ ಘಟನೆ ನಾಗಾಲ್ಯಾಂಡ್ ನಲ್ಲಿ ನಡೆದಿದೆ ಎಂದು newindianexpress.com ವರದಿ ಮಾಡಿದೆ.

ಘಟನೆಯಲ್ಲಿ ಮೃತಪಟ್ಟಿರುವ, ಗಾಯಗೊಂಡಿರುವ ಎಲ್ಲರೂ ಅಸ್ಸಾಂ ರಾಜ್ಯಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಅವರೆಲ್ಲ ನಾಗಾಲ್ಯಾಂಡ್ ನ ವಾಣಿಜ್ಯ ತಾಣವಾದ ದಿಮಾಪುರ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಜನರೇಟರ್ ನಿಂದ ತೈಲವು ಸೋರಿಕೆಯಾಗಿ ಈ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದರೆ, ಗಣಿಯಿಂದ ಅನಿಲ ಸೋರಿಕೆಯಾಗಿದ್ದರಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನೆಯ ಸಂದರ್ಭದಲ್ಲಿ ಯಾವುದೇ ಅಗ್ನಿಶಾಮಕ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳು ಗಣಿಯಲ್ಲಿ ಲಭ್ಯವಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಪಟ್ಟಿರುವ ಆರು ಮಂದಿ ಕಾರ್ಮಿಕರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ನೀಡಲು ಗಣಿಯ ಮಾಲಕರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News