ಮಹಾರಾಷ್ಟ್ರ | ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ
Update: 2024-11-25 05:08 GMT
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮಹಾರಾಷ್ಟ್ರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆಯನ್ನು ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಕ್ಷ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಿತ್ತು. ಎಂವಿಎ ಭಾಗವಾಗಿ ಸ್ಪರ್ಧಿಸಿದ್ದ 101 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದಲ್ಲದೆ ನಾನಾ ಪಟೋಲೆ ಸಾಕೋಲಿ ವಿಧಾನಸಭಾ ಕ್ಷೇತ್ರದಲ್ಲಿ 208 ಮತಗಳ ಅಲ್ಪ ಅಂತರದ ಗೆಲುವನ್ನು ದಾಖಲಿಸಿದ್ದರು. ಇದೀಗ ಸೋಲಿಗೆ ನೈತಿಕ ಹೊಣೆ ಹೊತ್ತು ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ.