ಪ್ರವಾದಿ ಪೈಗಂಬರರ ಕುರಿತು ದ್ವೇಷ ಭಾಷಣ: ನರಸಿಂಹಾನಂದ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಮಾಯಾವತಿ

Update: 2024-10-06 12:24 GMT

ಮಾಯಾವತಿ | PTI

ಲಕ್ನೊ: ಪ್ರವಾದಿ ಮುಹಮ್ಮದ್ ಪೈಂಗಬರ್ ಅವರ ವಿರುದ್ಧ ದ್ವೇಷ ಭಾಷಣ ಮಾಡಿರುವ ವಿವಾದಾತ್ಮಕ ಅರ್ಚಕ ಯತಿ ನರಸಿಂಗಾನಂದ್ ರನ್ನು ಟೀಕಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಅವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಮಾಯಾವತಿ, “ಉತ್ತರ ಪ್ರದೇಶದ ಘಾಝಿಯಾಬಾದ್ ನಲ್ಲಿನ ದಸ್ನಾ ದೇವಿ ದೇವಾಲಯದ ಅರ್ಚಕರು ಮತ್ತೊಮ್ಮೆ ಇಸ್ಲಾಂ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ. ಇದರಿಂದ ದೇಶದ ಹಲವಾರು ಭಾಗಗಳಲ್ಲಿ ಅಶಾಂತಿ ಮತ್ತು ಉದ್ವಿಗ್ನತೆ ಸೃಷ್ಟಿಯಾಗಿದೆ. ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಆದರೆ, ಮುಖ್ಯ ದುಷ್ಕರ್ಮಿಗಳು ಯಾವುದೇ ಶಿಕ್ಷೆಗೊಳಗಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಭಾರತೀಯ ಸಂವಿಧಾನವು ಜಾತ್ಯತೀತೆಯನ್ನು ಖಾತರಿಪಡಿಸಿದ್ದು, ಎಲ್ಲ ಧರ್ಮಗಳಿಗೂ ಸಮಾನ ಗೌರವವನ್ನು ನೀಡಲಾಗಿದೆ. ಹೀಗಾಗಿ, ಇದನ್ನು ಉಲ್ಲಂಘಿಸುವವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆ ಮೂಲಕ ದೇಶದ ಶಾಂತಿ ಮತ್ತು ಪ್ರಗತಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು” ಎಂದು ಅವರು ಮತ್ತೊಂದು ಪೋಸ್ಟ್ ನಲ್ಲಿ ಆಗ್ರಹಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಪೈಗಂಬರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿದ್ದ ನರಸಿಂಗಾನಂದ್ ವಿರುದ್ಧ ಪ್ರಕರಣ ದಾಖಲಾಗಿದೆ. ಅವರ ದ್ವೇಷ ಭಾಷಣದ ವಿರುದ್ಧ ದೇಶದ ವಿವಿದೆಡೆ ಪ್ರತಿಭಟನೆಗಳು ನಡೆದಿವೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News