ಸುಪ್ರೀಂ ಕೋರ್ಟ್ ಸೂಚನೆಯಂತೆ ನಗರವಾರು, ಕೇಂದ್ರವಾರು ನೀಟ್ ಫಲಿತಾಂಶ ಪ್ರಕಟಿಸಿದ ಎನ್‌ಟಿಎ
Update: 2024-07-20 08:07 GMT
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ (ಎನ್‌ಟಿಎ) ಇಂದು ನೀಟ್ ಯಜಿ 2024 ಪರೀಕ್ಷೆಯ ಫಲಿತಾಂಶಗಳನ್ನು ನಗರವಾರು ಮತ್ತು ಕೇಂದ್ರವಾರು ರೀತಿಯಲ್ಲಿ ಬಿಡುಗಡೆಗೊಳಿಸಿದೆ. ಇದನ್ನು ನೀಟ್ ಅಧಿಕೃತ ವೆಬ್‌ಸೈಟ್‌ನಲ್ಲಿ exams.nta.ac.in/NEET/ and neet.ntaonline.in.ನೋಡಬಹುದಾಗಿದೆ.
ನೀಟ್‌ನಲ್ಲಿ ನಡೆದಿದೆಯೆನ್ನಲಾದ ಹಲವಾರು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಎನ್‌ಟಿಎಗೆ ಮೇಲಿನಂತೆ ಫಲಿತಾಂಶ ಪ್ರಕಟಿಸಲು ಆದೇಶಿಸಿತ್ತು. ಈ ಫಲಿತಾಂಶವನ್ನು ಮೊದಲು ಜೂನ್ 5ರಂದು ಘೋಷಿಸಲಾಗಿತ್ತು.
ನೀಟ್ ಕುರಿತಾದ ಅರ್ಜಿಗಳ ವಿಚಾರಣೆಯನ್ನು ಜುಲೈ 22ರಂದು ಸುಪ್ರೀಂ ಕೋರ್ಟ್ ಮತ್ತೆ ಆರಂಭಿಸಲಿದೆ. ನೀಟ್ ಪರೀಕ್ಷೆ ರದ್ದುಗೊಳಿಸಿ ಮರುನಡೆಸಬೇಕು ಹಾಗೂ ಅವ್ಯವಹಾರಗಳ ಕುರಿತಂತೆ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅರ್ಜಿಗಳು ಸಲ್ಲಿಕೆಯಾಗಿವೆ.