ವೈದ್ಯೆಯ ಅತ್ಯಾಚಾರ, ಹತ್ಯೆ ಖಂಡಿಸಿ ನಾಳೆ (ಆ.17) ದೇಶಾದ್ಯಂತ ವೈದ್ಯರ ಪ್ರತಿಭಟನೆ
Update: 2024-08-16 06:28 GMT
ಹೊಸದಿಲ್ಲಿ: ಕೊಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಸಂತ್ರಸ್ತೆಯ ಹತ್ಯೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಆ. 17ರಂದು ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ನಿರ್ಧರಿಸಿದೆ.
ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ ಅಂದರೆ 24 ಗಂಟೆಗಳ ಕಾಲ ಎಲ್ಲ ಸೇವೆಗಳಿಂದ ವೈದ್ಯರು ದೂರ ಉಳಿಯಲಿದ್ದಾರೆ ಎಂದು ಐಎಂಎ ಪ್ರಕಟಿಸಿದೆ.