ಮಹಾರಾಷ್ಟ್ರ: ಎನ್‌ಸಿಪಿ ಶಾಸಕರಿಗೆ ಖಾತೆ ಹಂಚಿಕೆ; ಹಣಕಾಸು ಖಾತೆ ಅಜಿತ್‌ ಪವಾರ್‌ ತೆಕ್ಕೆಗೆ

Update: 2023-07-14 11:37 GMT

ಅಜಿತ್‌ ಪವಾರ್‌

ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದ ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ರಾಜ್ಯದ ಖಜಾನೆಯ ಜವಾಬ್ದಾರಿಯನ್ನು ನೀಡಲಾಗಿದೆ.

ಅಜಿತ್ ಪವಾರ್ ಅವರು ಯೋಜನಾ ಇಲಾಖೆಯ ಜೊತೆಗೆ ರಾಜ್ಯ ಸರ್ಕಾರದ ಪ್ರಮುಖ ಖಾತೆಯಾದ ಹಣಕಾಸು ಸಚಿವಾಲಯವನ್ನು ವಹಿಸಿಕೊಳ್ಳಲಿದ್ದಾರೆ ಎಂದು ndtv.com ವರದಿ ಮಾಡಿದೆ.

ಛಗನ್ ಭುಜಬಲ್ ಅವರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯನ್ನು ನೋಡಿಕೊಳ್ಳಲಿದ್ದಾರೆ. ಧರ್ಮರಾವ್ ಬಾಬಾ ಅತ್ರಮ್ ಅವರಿಗೆ ಡ್ರಗ್ ಮತ್ತು ಅಡ್ಮಿನಿಸ್ಟ್ರೇಷನ್ (ಎಫ್ಡಿಎ) ಜವಾಬ್ದಾರಿಯನ್ನು ನೀಡಲಾಗಿದೆ.

ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಸಹಕಾರ ಇಲಾಖೆ, ಧನಂಜಯ್ ಮುಂಡೆ ಅವರಿಗೆ ಕೃಷಿ ಖಾತೆಯನ್ನು ಹಂಚಲಾಗಿದೆ.

ಹಸನ್ ಮುಶ್ರಿಫ್ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ನಿರ್ವಹಿಸಿದರೆ, ಅನಿಲ್ ಪಾಟೀಲ್ ಅವರು ಪರಿಹಾರ ಮತ್ತು ಪುನರ್ವಸತಿ ಮತ್ತು ವಿಪತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಅದಿತಿ ತತ್ಕರೆ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಂಜಯ್ ಬನ್ಸೋಡೆ ಅವರಿಗೆ ಕ್ರೀಡೆ ಮತ್ತು ಯುವ ಕಲ್ಯಾಣ ಖಾತೆಗಳನ್ನು ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News