ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ 18 ಕ್ಷೇತ್ರಗಳಲ್ಲಿ 15ರಲ್ಲಿ ಎನ್‌ಡಿಎ ಗೆ ಸೋಲು

Update: 2024-06-06 13:53 IST
ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ 18 ಕ್ಷೇತ್ರಗಳಲ್ಲಿ 15ರಲ್ಲಿ ಎನ್‌ಡಿಎ ಗೆ ಸೋಲು

Photo:X/@narendramodi

  • whatsapp icon

ಹೊಸದಿಲ್ಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸರಳ ಬಹುಮತ ಪಡೆದು, ನರೇಂದ್ರ ಮೋದಿ ಮೂರನೆ ಅವಧಿಗೆ ಪ್ರಧಾನಿಯಾಗುವ ಹಾದಿ ಸುಗಮವಾಗಿದ್ದರೂ, ಮಹಾರಾಷ್ಟ್ರದಲ್ಲಿ ಬಿಜೆಪಿಯು ದಯನೀಯ ಪ್ರದರ್ಶನ ತೋರಿರುವುದರಿಂದ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಎನ್‌ಡಿಎ ಮೈತ್ರಿಪಕ್ಷಗಳಲ್ಲಿ ಆತಂಕ ಮನೆ ಮಾಡಿದೆ.

2019ರ ಲೋಕಸಭಾ ಚುನಾವಣೆಯಲ್ಲಿ 23 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ, ಈ ಬಾರಿ ಕೇವಲ 9 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳುವಂತಾಗಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಎಲ್ಲಿ ಹೆಚ್ಚು ಪ್ರಚಾರ ನಡೆಸಿದ್ದರೊ, ಆ ಕ್ಷೇತ್ರಗಳಲ್ಲೇ ಬಿಜೆಪಿಗೆ ಹೆಚ್ಚು ನಷ್ಟ ಉಂಟಾಗಿದೆ. ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ ಮಹಾರಾಷ್ಟ್ರದ ಸುಮಾರು 18 ಲೋಕಸಭಾ ಕ್ಷೇತ್ರಗಳ ಪೈಕಿ 15 ಲೋಕಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಪರಾಭವಗೊಂಡಿರುವುದು ಚುನಾವಣಾ ಆಯೋಗದ ದತ್ತಾಂಶಗಳಿಂದ ಬಯಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News