ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ ದಿಲ್ಲಿ ಹೈಕೋರ್ಟ್

Update: 2024-06-25 09:28 GMT

ಅರವಿಂದ್‌ ಕೇಜ್ರಿವಾಲ್‌ (PTI)

ಹೊಸದಿಲ್ಲಿ : ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಜಾಮೀನು ಆದೇಶಕ್ಕೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ(ಈಡಿ) ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠವು ಜೂನ್ 20 ರಂದು ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಿದೆ. ಈಡಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮಟ್ಟಿಲೇರಿತ್ತು. ನಂತರ ಪೀಠವು ಜೂನ್ 21 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. .

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News