ದಿಲ್ಲಿ: ಅರವಿಂದ್ ಕೇಜ್ರಿವಾಲ್ ನಿವಾಸದೆದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Update: 2025-01-10 09:35 GMT

Screengrab:X/ANI

ಹೊಸದಿಲ್ಲಿ: ಆಪ್ ಮುಖ್ಯಸ್ಥ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದೆದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಇದಕ್ಕೂ ಮುನ್ನ, ಎಕ್ಸ್ ನಲ್ಲಿ ವಿಡಿಯೊ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದ ಅರವಿಂದ್ ಕೇಜ್ರಿವಾಲ್, “ಬಿಜೆಪಿಯು ರಾಷ್ಟ್ರ ರಾಜಧಾನಿಯನ್ನು ಅಪರಾಧಗಳ ನಗರವನ್ನಾಗಿಸಿದೆ. ದಿಲ್ಲಿಯಲ್ಲಿ ನಿತ್ಯ ಸುಲಿಗೆ, ಸರ ಅಪಹರಣ ಹಾಗೂ ಗ್ಯಾಂಗ್ ವಾರ್ ಗಳು ನಡೆಯುತ್ತಿವೆ. ಇದರಿಂದ ಮಹಿಳೆಯರು ಮನೆಯಿಂದ ಹೊರಗೆ ಬರುವುದು ಕಷ್ಟಕರವಾಗಿ ಪರಿಣಮಿಸಿದೆ. ಬಿಜೆಪಿಯು ದಿಲ್ಲಿಯ ಜನರನ್ನು ದ್ವೇಷಿಸುತ್ತದೆ. ಕಳೆದ 25 ವರ್ಷಗಳಿಂದ ತಾನು ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿ ಬರಲು ಸಾಧ್ಯವಾಗಿಲ್ಲ ಎಂಬುದು ಈ ದ್ವೇಷಕ್ಕೆ ಕಾರಣ” ಎಂದು ಸುದೀರ್ಘ ಪೋಸ್ಟ್ ಮಾಡಿದ್ದರು.

ಅರವಿಂದ್ ಕೇಜ್ರಿವಾಲ್ ರ ಈ ಹೇಳಿಕೆಯನ್ನು ಖಂಡಿಸಿ, ಇಂದು ಬಿಜೆಪಿ ಕಾರ್ಯಕರ್ತರು ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News