7 ರಾಜ್ಯಗಳ 17 ಸ್ಥಳಗಳಲ್ಲಿ ಎನ್‌ಐಎ ದಾಳಿ
ಹೊಸದಿಲ್ಲಿ: ಬೆಂಗಳೂರಿನ ಕಾರಾಗೃಹದಲ್ಲಿ ಉಗ್ರನೊಬ್ಬ ಕೈದಿಗಳನ್ನು ತೀವ್ರಗಾಮಿಗಳಾಗಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿಯು ಮಂಗಳವಾರ ಏಳು ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಏಳು ಪಿಸ್ತೂಲುಗಳು, ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಮ್ಯಾಗಜೀನ್, 45 ಸಜೀವ ಗುಂಡುಗಳು ಹಾಗೂ ನಾಲ್ಕು ವಾಕಿಟಾಕಿಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಆರಂಭದಲ್ಲಿ ಈ ಪ್ರಕರಣ ಸಂಬಂಧ ಐದು ಜನರನ್ನು ಬಂಧಿಸಲಾಗಿದ್ದರೆ ನಂತರ ಇನ್ನೊಬ್ಬನನ್ನು ಬಂಧಿಸಲಾಗಿತ್ತು.
ಪ್ರಮುಖ ಆರೋಪಿ ಟಿ ನಾಸಿರ್ ಎಂಬಾತ ಈ ವ್ಯಕ್ತಿಗಳನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ತೀವ್ರಗಾಮಿಗಳನ್ನಾಗಿಸುವ ಕಾರ್ಯಕ್ಕೆ ಕೈಹಾಕಿದ್ದನೆಂದು ಆರೋಪಿಸಲಾಗಿದೆ.
ಇನ್ನೊಬ್ಬ ಆರೋಪಿ ಜುನೈದ್ ಅಹ್ಮದ್ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ.
ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಎನ್‌ಐಎ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು ಹಾಗೂ ಹಲವೆಡೆ ಶೋಧ ಕಾರ್ಯಾಚರಣೆ ನಡೆಸಿತ್ತು.