ಮಲಪ್ಪುರಂನಲ್ಲಿ ನಿಫಾ ಸೋಂಕು ದೃಢ : ಆರೋಗ್ಯ ಸಚಿವೆ ವೀಣಾ ಜಾರ್ಜ್
Update: 2024-07-20 15:21 GMT
ತಿರುವನಂತಪುರಂ : ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ಬಾಲಕನೋರ್ವನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನಲ್ಲಿ ನಿಫಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ ಎಂದು ಅವರು ಹೇಳಿದ್ದಾರೆ.
‘ಸೋಂಕು ತಗುಲಿದ ಬಾಲಕನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಬಾಲಕನ ಸಂಪರ್ಕಕ್ಕೆ ಬಂದಿದ್ದವರನ್ನು ಪತೆ ಮಾಡಲಾಗಿದ್ದು, ಅವರನ್ನು ಕ್ವಾರಂಟೇನ್ ಮಾಡಲಾಗಿದೆ. ಎಲ್ಲರ ಮಾದರಿಗಳನ್ನು ರಾಷ್ಟ್ರೀಯ ವೈರಾಣು ಸಂಸ್ಥೆಗೆ ಪರೀಕ್ಷೆಗೆ ಕಳಿಸಲಾಗಿದೆ’ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.