ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ಮೃತ್ಯು, 20 ಮಂದಿಗೆ ಗಾಯ

Update: 2024-09-29 05:06 GMT

Photo: PTI

ಮಧ್ಯಪ್ರದೇಶ: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ವೊಂದು ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಹಾರ್ ಜಿಲ್ಲೆಯ ನಾದನ್ ದೇಹತ್ ಪೊಲೀಸ್ ಠಾಣೆ ಬಳಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ನಿಂತಿದ್ದ ಕಲ್ಲು ತುಂಬಿದ ಟ್ರಕ್ಗೆ ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮೈಹರ್ನ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರವಾಲ್ ತಿಳಿಸಿದ್ದಾರೆ.

ಪ್ರಾಥಮಿಕವಾಗಿ ಬಸ್ ನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಬೆಳಗ್ಗಿನ ಜಾವ 2 ಗಂಟೆ ವೇಳೆ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಗರವಾಲ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News