ದಿಲ್ಲಿ ಅಬಕಾರಿ ನೀತಿ ಪ್ರಕರಣ: ಮನೀಷ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
Update: 2023-10-30 05:39 GMT
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಹಿರಿಯ ಆಪ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನಿರಾಕರಿಸಿದೆ. ಇದರಿಂದ ಸಿಸೋಡಿಯಾ ಇನ್ನೂ ಆರು ತಿಂಗಳು ಜೈಲಿನಲ್ಲಿಯೇ ಉಳಿಯಬೇಕಾಗಿದೆ.
ಈ ಪ್ರಕರಣದಲ್ಲಿ ರೂ. 336 ಕೋಟಿ ಹಣದ ವ್ಯವಹಾರ ತಿಳಿದು ಬಂದಿರುವುದರಿಂದ ವಿಚಾರಣೆಯು ಆರರಿಂದ ಎಂಟು ತಿಂಗಳುಗಳೊಳಗೆ ಪೂರ್ಣಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ಒಂದು ವೇಳೆ ಈ ಅವಧಿಯೊಳಗೆ ವಿಚಾರಣೆ ಪೂರ್ಣಗೊಳ್ಳದೇ ಇದ್ದರೆ ಸಿಸೋಡಿಯಾ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.
ಅದೇ ಸಮಯ ತನಿಖಾ ಏಜನ್ಸಿಗಳು ಎಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ.