ಏಕನಾಥ್ ಶಿಂದೆಗೆ ಹಿನ್ನಡೆ: ಸಾಮೂಹಿಕ ನಾಯಕತ್ವದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಎದುರಿಸಲಿರುವ ಬಿಜೆಪಿ

Update: 2024-07-21 06:29 GMT

Photo credit: ANI

ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಎರಡನೆ ಸ್ಥಾನದಲ್ಲಿರುವ ಆಡಳಿತಾರೂಢ ಮೈತ್ರಿಕೂಟವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಸ್ಪರ್ಧಿಸಲು ಯೋಜಿಸಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು NDTV ವರದಿ ಮಾಡಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು 30 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಗೆ 160ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಉತ್ಸುಕವಾಗಿದೆ. ಈ ಚುನಾವಣೆಯಲ್ಲಿ ಯಾವುದೇ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವ ಬದಲು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಲು ಮೈತ್ರಿಕೂಟ ನಿರ್ಧರಿಸಿದೆ ಎನ್ನಲಾಗಿದೆ. ಇದರಿಂದ ಮಹಾರಾಷ್ಟ್ರದ ಹಾಲಿ ಮುಖ್ಯಮಂತ್ರಿ ಹಾಗೂ ಶಿವಸೇನೆಯ ಮುಖ್ಯಸ್ಥ ಏಕನಾಥ್ ಶಿಂದೆಗೆ ಭಾರಿ ಹಿನ್ನಡೆಯಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದು, ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಉಳಿದ ಮೈತ್ರಿ ಪಕ್ಷಗಳಾಗಿವೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News