ನೀಟ್-ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಯಾವುದೇ ಸಾಕ್ಷ್ಯವಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಹೊಸದಿಲ್ಲಿ: ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಸ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಯಾವುದೇ ಸಾಕ್ಷ್ಯವಿಲ್ಲ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಸುಳ್ಳು ಎಂದು ತಳ್ಳಿ ಹಾಕಿರುವ ಪ್ರಧಾನ್, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಹೇಳಿದ್ದಾರೆ.
ಸದ್ಯ ಉದ್ಭವಿಸಿರುವ ಸ್ಥಿತಿಯಿಂದ ಯಾವುದೇ ವಿದ್ಯಾರ್ಥಿಗೆ ಅನನುಕೂಲವಾಗದಿರುವುದನ್ನು ಖಾತರಿ ಪಡಿಸಲು ಸುಪ್ರೀಂ ಕೋರ್ಟ್ ನ ನಿರ್ಧಾರಕ್ಕೆ ನಾವು ಬದ್ಧವಾಗಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ನೀಟ್ ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಂಬಿಬಿಎಸ್, ಬಿಡಿಎಸ್ ಹಾಗೂ ಇನ್ನಿತರ ಪದವಿಗಳಿಗೆ ಅರ್ಹತೆ ಪಡೆದಿದ್ದ 1,563 ಅಭ್ಯರ್ಥಿಗಳಿಗೆ ನೀಡಲಾಗಿದ್ದ ಕೃಪಾಂಕವನ್ನು ರದ್ದುಗೊಳಿಸುವ ಕೇಂದ್ರ ಸರಕಾರದ ಪ್ರಸ್ತಾವಕ್ಕೆ ಗುರುವಾರ ಸುಪ್ರೀಂ ಕೋರ್ಟ್ ನ ರಜಾಪೀಠವು ಸಮ್ಮತಿ ಸೂಚಿಸಿದೆ.