ಸಂಸತ್ ಕಲಾಪಗಳಿಗೆ ಅಡ್ಡಿಪಡಿಸಬೇಡಿ: ವಿರೋಧ ಪಕ್ಷಗಳಿಗೆ ಪ್ರಧಾನಿ ಮೋದಿ ಆಗ್ರಹ

Update: 2024-01-31 06:50 GMT

ಪ್ರಧಾನಿ ನರೇಂದ್ರ ಮೋದಿ (PTI)

ಹೊಸದಿಲ್ಲಿ: ಸಂಸತ್ ಕಲಾಪಗಳಿಗೆ ಅಡ್ಡಿ ಪಡಿಸದಂತೆ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳನ್ನು ಆಗ್ರಹಿಸಿದ್ದಾರೆ. “ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮುರಿಯುವ ಅಭ್ಯಾಸ ಇರುವ ಸಂಸದರು ತಮ್ಮ ಸಂಸತ್ ಸದಸ್ಯತ್ವದ ಹಿನ್ನೆಲೆಯಲ್ಲಿ ಸ್ವಯಂ ನಿರೀಕ್ಷಣೆ ಮಾಡಿಕೊಳ್ಳಲಿದ್ದಾರೆ ಎಂದು ಆಶಿಸುತ್ತೇನೆ” ಎಂದು ಅವರು ಹೇಳಿದ್ದಾರೆ ಎಂದು ndtv.com ವರದಿ ಮಾಡಿದೆ.

“ಸಂಸತ್ತಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡುವವರನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಲಾಗುತ್ತದೆ. ಆದರೆ, ಯಾರು ಸಂಸತ್ ಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾರೆ ಅಂತಹವರನ್ನು ಯಾರೂ ನೆನಪಿಟ್ಟುಕೊಳ್ಳುವುದಿಲ್ಲ. ಈ ಬಜೆಟ್ ಅಧಿವೇಶನವು ಪಶ್ಚಾತ್ತಾಪಕ್ಕೆ ಹಾಗೂ ಸಕಾರಾತ್ಮಕ ಹೆಜ್ಜೆ ಗುರುತುಗಳನ್ನು ಮೂಡಿಸಲು ಒಂದು ಸದವಕಾಶವಾಗಿದೆ. ಸಂಸದರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ದೊರೆತಿರುವ ಈ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ನಾನು ಮನವಿ ಮಾಡುತ್ತೇನೆ” ಎಂದು ಮೋದಿ ಕರೆ ನೀಡಿದ್ದಾರೆ.

ನಾಳೆಯಿಂದ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ ಫೆಬ್ರವರಿ 9ರವರೆಗೆ ಮುಂದುವರಿಯಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.

ಹೊಸ ಸರ್ಕಾರ ರಚನೆಯಾದ ಬೆನ್ನಿಗೇ ಬಿಜೆಪಿಯು ಪೂರ್ಣ ಬಜೆಟ್ ಮಂಡಿಸಲಿದೆ ಎಂದೂ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

“ನೂತನ ಸರ್ಕಾರ ರಚನೆಯಾದ ನಂತರ ಪೂರ್ಣ ಬಜೆಟ್ ಮಂಡಿಸುವ ಸಂಪ್ರದಾಯವನ್ನು ನಾವು ಅನುಸರಿಸಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News