ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಶರಣಾಗತಿಯ ಬಗ್ಗೆ ಇನ್ನೂ ಮಾಹಿತಿ ಇಲ್ಲ: ದಾಹೋದ್ ಎಸ್ಪಿ ಹೇಳಿಕೆ

Update: 2024-01-10 06:20 GMT
Photo: PTI

ಅಹಮದಾಬಾದ್ : ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ 11 ಅಪರಾಧಿಗಳ ಶರಣಾಗತಿ ಕುರಿತು ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ದಾಹೋದ್‌ನ ಎಸ್ಪಿ ಬಲರಾಮ್ ಮೀನಾ ಹೇಳಿದ್ದಾಗಿ indianexpress.com ವರದಿ ಮಾಡಿದೆ.

“ಅಪರಾಧಿಗಳು ವಾಸಿಸುವ ಪ್ರದೇಶದಲ್ಲಿ ಶಾಂತಿ ವ್ಯವಸ್ಥೆ ಕಾಪಾಡಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅವರಲ್ಲಿ ಕೆಲವರು ಸಂಬಂಧಿಕರನ್ನು ಭೇಟಿ ಮಾಡುತ್ತಿದ್ದಾರೆ. ಅಪರಾಧಿಗಳ ಶರಣಾಗತಿ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಮಾಹಿತಿ ಬಂದಿಲ್ಲ. ನಾವು ಸುಪ್ರೀಂ ಕೋರ್ಟ್ ಆದೇಶದ ಪ್ರತಿಯನ್ನೂ ಸ್ವೀಕರಿಸಿಲ್ಲ” ಎಂದು ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಹೇಳಿದ್ದಾರೆ.

ಗುಜರಾತ್ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಟೀಕಿಸಿದ ಸುಪ್ರೀಂ ಕೋರ್ಟ್, ಪ್ರಕರಣದ 11 ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸೋಮವಾರ ರದ್ದುಗೊಳಿಸಿದೆ. 2022 ರ ಸ್ವಾತಂತ್ರ್ಯ ದಿನದಂದು ಅಕಾಲಿಕವಾಗಿ ಬಿಡುಗಡೆಯಾದ ಎಲ್ಲಾ ಅಪರಾಧಿಗಳನ್ನು ಎರಡು ವಾರಗಳಲ್ಲಿ ಜೈಲಿಗೆ ಹಿಂತಿರುಗಬೇಕು ಎಂದು ಆದೇಶ ನೀಡಿದೆ.

“ಶಿಕ್ಷೆಗೊಳಗಾದವರು ಸಿಂಗವಾಡ್ ತಾಲೂಕಿನ ಸ್ಥಳೀಯರಾಗಿದ್ದು, ತೀರ್ಪು ಹೊರಬೀಳುವ ಮುನ್ನ ಸೋಮವಾರ ಬೆಳಗ್ಗೆಯಿಂದಲೇ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕೋಮು ಸಂಘರ್ಷ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ” ಎಂದು ದಾಹೋದ್‌ ಎಸ್ಪಿ ಬಲರಾಮ್ ಮೀನಾ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News