ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್‌ ನಾಯಕ ಪವನ್‌ ಖೇರಾ ವಿರುದ್ಧದ ಪ್ರಕರಣ ಕೈಬಿಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

Update: 2024-01-04 11:56 GMT

ಪವನ್‌ ಖೇರಾ| Photo: PTI  

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಕುರಿತಂತೆ ನೀಡಿದ್ದಾರೆನ್ನಲಾದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ತಮ್ಮ ವಿರುದ್ಧದ ಕಾನೂನು ಕ್ರಮವನ್ನು ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್‌ ಹೈಕೋರ್ಟ್‌ ಆದೇಶದ ವಿರುದ್ಧ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಹೈಕೋರ್ಟ್‌ ಆದೇಶದಲ್ಲಿ ಹಸ್ತಕೇಪ ನಡೆಸಲು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರ ಪೀಠ ಹೇಳಿದೆ.

ಕಳೆದ ವರ್ಷದ ಆಗಸ್ಟ್‌ 17ರಂದು ಅಲಹಾಬಾದ್‌ ಹೈಕೋರ್ಟ್‌ ಪವನ್‌ ಖೇರಾ ಅವರ ಅರ್ಜಿಯನ್ನು ವಜಾಗೊಳಿಸಿತ್ತು ಕ್ರಿಮಿನಲ್‌ ದಂಡ ಸಂಹಿತೆಯ ಸೆಕ್ಷನ್‌ 482 ಅಡಿಯಲ್ಲಿ ದಾಖಲಾಗಿರುವ ಅರ್ಜಿಯಲ್ಲಿ ತನಿಖಾಧಿಕಾರಿ ಸಂಗ್ರಹಿಸಿದ ಪುರಾವೆಯನ್ನು ಪರಿಶೀಲಿಸಲಾಗದು ಎಂದು ಹೇಳಿತ್ತು.

ಖೇರಾ ವಿರುದ್ಧ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ದಾಖಲಾದ ಮೂರು ಎಫ್‌ಐಆರ್‌ಗಳನ್ನು ಕಳೆದ ವರ್ಷದ ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ಜೊತೆಗೂಡಿಸಿತ್ತಲ್ಲದೆ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿ ಈ ಪ್ರಕರಣವನ್ನು ಲಕ್ನೋದ ಹಜ್ರತ್‌ಗಂಜ್‌ ಪೊಲೀಸ್‌ ಠಾಣೆಗೆ ವರ್ಗಾಯಿಸಿತ್ತು.

ಲಕ್ನೋ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರುಗೊಳಿಸಿತ್ತು. ತಮ್ಮ ಹೇಳಿಕೆಗೆ ಪವನ್‌ ಖೇರಾ ಅವರು ನ್ಯಾಯಾಲಯದಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News