ತಮಿಳುನಾಡಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ: ಸಿಎಂ ಸ್ಟಾಲಿನ್

Update: 2023-09-23 08:27 GMT

Photo:X

ಚೆನ್ನೈ: ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಶನಿವಾರ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರಕಟಿಸಿದ್ದಾರೆ ಎಂದು indiatoday.in ವರದಿ ಮಾಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಅಂಗಾಂಗ ದಾನದಲ್ಲಿ ತಮಿಳುನಾಡು ಮುಂಚೂಣಿಯಲ್ಲಿದ್ದು, ನೂರಾರು ಮಂದಿ ರೋಗಿಗಳಿಗೆ ಜೀವದಾನ ಮಾಡಿದೆ ಎಂದು ಹೇಳಿದ್ದಾರೆ.

“ದುರಂತಮಯ ಘಟನೆಗಳಲ್ಲಿ ತಮ್ಮ ಪ್ರೀತಿಪಾತ್ರದ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬಂದಿರುವ ಕುಟುಂಬಗಳ ತ್ಯಾಗದಿಂದ ಈ ಸಾಧನೆಯನ್ನು ಮಾಡಲು ಸಾಧ್ಯವಾಗಿದೆ” ಎಂದೂ ಅವರು ತಿಳಿಸಿದ್ದಾರೆ.

ಅಂಗಾಂಗ ದಾನಿಗಳು ಹಾಗೂ ಅವರ ಕುಟುಂಬದ ಸದಸ್ಯರ ತ್ಯಾಗವನ್ನು ಗೌರವಿಸುವ ಸಲುವಾಗಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವ ನಿರ್ಣಯವನ್ನು ತಮಿಳುನಾಡು ಸರ್ಕಾರ ತೆಗೆದುಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News