2023ರಲ್ಲಿ ಸಂಸದರು, ಶಾಸಕರ ವಿರುದ್ಧದ 2,000ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳು ಇತ್ಯರ್ಥ | ಸುಪ್ರೀಂ ಕೋರ್ಟ್ ಗೆ ಮಾಹಿತಿ

Update: 2024-04-22 16:16 GMT

 ಸುಪ್ರೀಂ ಕೋರ್ಟ್ |  PC : PTI 

ಹೊಸದಿಲ್ಲಿ : ಸಂಸತ್ ಮತ್ತು ವಿಧಾನಸಭಾ ಸದಸ್ಯರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಗಳು 2023ರಲ್ಲಿ 2,000ಕ್ಕೂ ಅಧಿಕ ಪ್ರಕರಣಗಳನ್ನು ತೀರ್ಮಾನಿಸಿವೆ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಲೇವಾರಿಯನ್ನು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಅಮಿಕಸ್ ಕ್ಯುರೆಯಾಗಿ ನೇಮಕಗೊಂಡಿರುವ ಹಿರಿಯ ನ್ಯಾಯವಾದಿ ವಿಜಯ ಹನ್ಸಾರಿಯಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಈ ಮಾಹಿತಿಯನ್ನು ಒದಗಿಸಿದ್ದಾರೆ.

ಲೋಕಸಭಾ ಚುನಾವಣೆಗಳ ಮೊದಲ ಎರಡು ಹಂತಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಸುಮಾರು 501 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಹೀಗಾಗಿ ಬಾಕಿಯುಳಿದಿರುವ ವಿಚಾರಣೆಗಳಲ್ಲಿ ತ್ವರಿತ ತೀರ್ಪು ಮತ್ತು ಆಯಾ ಉಚ್ಚ ನ್ಯಾಯಾಲಯಗಳಿಂದ ಅವುಗಳ ಕಟ್ಟುನಿಟ್ಟಿನ ತನಿಖೆಗಾಗಿ ಹೆಚ್ಚಿನ ನಿರ್ದೇಶನಗಳ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News