ಪಹಲ್ಗಾಮ್ ಭಯೋತ್ಪಾದಕ ದಾಳಿ: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಪ್ರವಾಸ ಮೊಟಕುಗೊಳಿಸಿದ ರಾಹುಲ್ ಗಾಂಧಿ
Update: 2025-04-24 15:34 IST

ರಾಹುಲ್ ಗಾಂಧಿ | PC : PTI
ಹೊಸದಿಲ್ಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಚರ್ಚಿಸಲು ಗುರುವಾರ ಆಯೋಜನೆಗೊಂಡ ಕಾಂಗ್ರೆಸ್ ಪಕ್ಷದ ಅತ್ಯುನ್ನತ ನೀತಿ ನಿರ್ಧಾರಕ ಅಂಗವಾದ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಭಾಗವಹಿಸಲು ತಮ್ಮ ಅಮೆರಿಕ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬುಧವಾರ ರಾತ್ರಿಯೇ ಸ್ವದೇಶಕ್ಕೆ ಮರು ಪ್ರಯಾಣ ಬೆಳೆಸಿದ್ದಾರೆ.
26 ಮಂದಿಯನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಗುರುವಾರ ಸಭೆ ಸೇರಿದೆ
ಶನಿವಾರ ಅಮೆರಿಕದ ಬೋಸ್ಟನ್ ಗೆ ತೆರಳಿದ್ದ ರಾಹುಲ್ ಗಾಂಧಿ, ಅಲ್ಲಿನ ಉದ್ಯಮಿಗಳು ಹಾಗೂ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದ್ದರು.