ಪಾಕ್: ಇಮ್ರಾನ್ ಪಕ್ಷದ ಮುಖಂಡನ ಗುಂಡಿಕ್ಕಿ ಹತ್ಯೆ
Update: 2024-01-11 17:34 GMT
ಪೇಷಾವರ : ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಗುರುವಾರ ಮಾಜಿ ಪ್ರಧಾನಿ ಇಮ್ರಾನ್‍ಖಾನ್ ಅವರ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷದ ಮುಖಂಡ ಶಾ ಖಾಲಿದ್‍ರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.
ಖೈಬರ್ ಪಖ್ತೂಂಕ್ವಾದ ಸ್ವಾಬಿ ಜಿಲ್ಲೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಖಾಲಿದ್ ಅವರನ್ನು ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಗುರುತಿಸಲಾಗದ ಹಂತಕರು ಕಾರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ. ಖಾಲಿದ್ ಸ್ಥಳದಲ್ಲೇ ಮೃತಪಟ್ಟಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು `ಜಿಯೊ ನ್ಯೂಸ್' ವರದಿ ಮಾಡಿದೆ. ಬುಧವಾರ ಇದೇ ಪ್ರಾಂತದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರ ಹತ್ಯೆಯಾಗಿತ್ತು.