ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ

Update: 2025-01-12 09:17 GMT

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ (PTI)

ಗುನಾ(ಮಧ್ಯಪ್ರದೇಶ): ದೇಶದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು ತಿಳಿಸಿದ್ದಾರೆ.

ತನ್ನ ಲೋಕಸಭಾ ಕ್ಷೇತ್ರವಾದ ಇಲ್ಲಿ ಶನಿವಾರ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಿಂದಿಯಾ,ಪ್ರಧಾನಿ ನರೇಂದ್ರ ಮೋದಿಯವರು ಸೇವೆಗಳನ್ನು ವಿಸ್ತರಿಸುವ ಉದ್ದೇಶದಿಂದ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ತೆರೆಯಲು ನಿರ್ಧರಿಸಿದ್ದಾರೆ. ಅಂಚೆ ಇಲಾಖೆಯು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದೊಂದಿಗೆ ಈ ನಿರ್ಧಾರವನ್ನು ಕಾರ್ಯಗತಗೊಳಿಸಲಿದೆ ಎಂದರು.

ದೇಶಾದ್ಯಂತ 6,000 ನೂತನ ಅಂಚೆ ಕಚೇರಿಗಳನ್ನು ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ ಸಚಿವರು, ‘ದೇಶದಲ್ಲಿ ಕೈಯಿಂದ ಪತ್ರಗಳನ್ನು ಬರೆಯುವ ಸಂಪ್ರದಾಯದ ಪುನರುಜ್ಜೀವನಕ್ಕೆ ನಾವು ಪ್ರಯತ್ನಿಸಬೇಕು, ಏಕೆಂದರೆ ಅದು ಹೃದಯದ ನಿಜವಾದ ಭಾವನೆಗಳನ್ನು ವ್ಯಕ್ತಪಡಿಸುತ್ತದೆ’ ಎಂದು ಹೇಳಿದರು.

ಅಂಚೆ ಕಚೇರಿ ಸೇವೆಗಳಲ್ಲಿ ಹಲವಾರು ತಾಂತ್ರಿಕ ಬದಲಾವಣೆಗಳಾಗಿವೆ ಎಂದೂ ಸಿಂದಿಯಾ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News