ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಪವನ್‌ ಕಲ್ಯಾಣ್‌ ಕಣ್ಣು: ಐದು ಸಚಿವ ಸ್ಥಾನಕ್ಕೆ ಜನಸೇನಾ ಬೇಡಿಕೆ

Update: 2024-06-11 11:57 IST
ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಪವನ್‌ ಕಲ್ಯಾಣ್‌ ಕಣ್ಣು: ಐದು ಸಚಿವ ಸ್ಥಾನಕ್ಕೆ ಜನಸೇನಾ ಬೇಡಿಕೆ

 Photo: India Today

  • whatsapp icon

ಹೈದರಾಬಾದ್: ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಬಯಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪವಣ್‌ ಕಲ್ಯಾಣ್ ತಮ್ಮ ಪಕ್ಷಕ್ಕೆ ಐದು ಕ್ಯಾಬಿನೆಟ್ ಹುದ್ದೆಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳನ್ನು ಆಧರಿಸಿ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಜನಸೇನಾ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಪವಣ್‌ ಕಲ್ಯಾಣ್‌ ಅವರನ್ನು ಜನಸೇನಾ ಪಕ್ಷದ ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ.

ಜನಸೇನಾ ತೆನಾಲಿ ಶಾಸಕ ಎನ್ ಮನೋಹರ್ ಅವರು ಪವನ್ ಕಲ್ಯಾಣ್ ಅವರ ಹೆಸರನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದನ್ನು ಇತರ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News