ನಾನು ಅವರನ್ನು ಪ್ರತಿನಿಧಿಸಬೇಕು ಎಂದು ಅಮೇಥಿ ಜನರು ಬಯಸುತ್ತಿದ್ದಾರೆ: ಚುನಾವಣೆಗೆ ಸ್ಪರ್ಧಿಸುವ ಕುರಿತು ರಾಬರ್ಟ್ ವಾದ್ರಾ

Update: 2024-04-16 09:44 GMT

ರಾಬರ್ಟ್ ವಾದ್ರಾ | PC : PTI 

ಮಥುರಾ (ಉತ್ತರ ಪ್ರದೇಶ): ಅಮೇಥಿ ಜನರು ನಾನು ಅವರ ಪ್ರತಿನಿಧಿಯಾಗುವುದನ್ನು ಬಯಸುತ್ತಿದ್ದಾರೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ‍ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಹೇಳಿದ್ದಾರೆ.

ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಗಳಾಗಿರುವ ಅಮೇಥಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್ ಇನ್ನೂ ಘೋಷಿಸಿಲ್ಲ. ಪ್ರಿಯಾಂಕಾ ಗಾಂಧಿಯವರ ಸಹೋದರ ರಾಹುಲ್ ಗಾಂಧಿ ಅವರು ಮತ್ತೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಪರಾಭವಗೊಂಡಿದ್ದರು.

ಉತ್ತರ ಪ್ರದೇಶದ ವೃಂದಾವನಕ್ಕೆ ಭೇಟಿ ನೀಡಿದ್ದ ರಾಬರ್ಟ್ ವಾದ್ರಾ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಇರಲಿ ಅಥವಾ ಮಥುರಾ ಇರಲಿ ನಾನು ಎಲ್ಲವನ್ನೂ ಒಂದೇ ರೀತಿಯಲ್ಲಿ ನೋಡುತ್ತೇನೆ ಎಂದು ಹೇಳಿದ್ದಾರೆ.

“ದೇಶದಲ್ಲಿ ಶಾಂತಿ ಮತ್ತು ಸಂಭ್ರಮ ನೆಲೆಸಿರಲಿ ಎಂದು ಬಂಕೆ ಬಿಹಾರಿಗೆ ಪ್ರಾರ್ಥಿಸಲಾಯಿತು. ಈ ಪ್ರಯತ್ನದಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಬ್ಬರು ಖಂಡಿತ ಯಶಸ್ಸು ಪಡೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಾಬರ್ಟ್ ವಾದ್ರಾ ಆಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News