ಎನ್‌ಎಚ್‌ಆರ್‌ಸಿಯ ಖಾಲಿ ಹುದ್ದೆ ಭರ್ತಿ ಮಾಡಲು ನಿರ್ದೇಶಿಸುವಂತೆ ಕೋರಿ ಅರ್ಜಿ

Update: 2023-07-04 18:06 GMT

The NHRC office | File Photo

ಹೊಸದಿಲ್ಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC)ದಲ್ಲಿರುವ 3 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ ಮನವಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರಕಾರದ ಪ್ರತಿಕ್ರಿಯೆ ಕೋರಿದೆ.

ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನು ಒಳಗೊಂಡ ಪೀಠ ಕೇಂದ್ರ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ.

ಅಲ್ಲದೆ, ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಮೂರು ಹುದ್ದೆಗಳು 2021 ಸೆಪ್ಟಂಬರ್ 11, 2023 ಜನವರಿ 4 ಹಾಗೂ 2022 ಎಪ್ರಿಲ್ 4ರಿಂದ ಖಾಲಿ ಬಿದ್ದಿವೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ನ್ಯಾಯವಾದಿ ರಾಧಾಕಾಂತ್ ತ್ರಿಪಾಠಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News