"ಸಂಘ ಪರಿವಾರ ನಡೆಸುತ್ತಿರುವ ದ್ವೇಷದ ಅಭಿಯಾನ": ಕೇರಳವನ್ನು ಪಾಕಿಸ್ತಾನ ಎಂದ ಬಿಜೆಪಿ ನಾಯಕನ ಹೇಳಿಕೆಗೆ ಪಿಣರಾಯಿ ವಿಜಯನ್‌ ಖಂಡನೆ

Update: 2024-12-31 10:45 GMT

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (PTI) 

ತಿರುವನಂತಪುರ: ಕೇರಳವನ್ನು ʼಮಿನಿ ಪಾಕಿಸ್ತಾನʼ ಎಂದು ಬಣ್ಣಿಸಿರುವ ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ.

ಈ ಹೇಳಿಕೆಯು ದುರುದ್ದೇಶಪೂರಿತ ಮತ್ತು ಸಂಪೂರ್ಣವಾಗಿ ಖಂಡನೀಯ ಎಂದು ಹೇಳಿದ ವಿಜಯನ್‌, ಇದು ಕೇರಳದ ವಿರುದ್ಧ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

"ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್‌ ರಾಣೆ ಅವರು ಕೇರಳವನ್ನು 'ಮಿನಿ-ಪಾಕಿಸ್ತಾನ' ಎಂದು ಲೇಬಲ್ ಮಾಡುವ ಅವಹೇಳನಕಾರಿ ಹೇಳಿಕೆಯು ಅತ್ಯಂತ ದುರುದ್ದೇಶಪೂರಿತ ಮತ್ತು ಸಂಪೂರ್ಣವಾಗಿ ಖಂಡನೀಯವಾಗಿದೆ. ಇಂತಹ ಹೇಳಿಕೆಯು ಜಾತ್ಯತೀತತೆ ಮತ್ತು ಕೋಮು ಸೌಹಾರ್ದತೆಯ ಭದ್ರಕೋಟೆಯಾಗಿರುವ ಕೇರಳದ ವಿರುದ್ಧ ಸಂಘ ಪರಿವಾರ ನಡೆಸುತ್ತಿರುವ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ. ಕೇರಳದ ಮೇಲಿನ ಈ ಹೀನ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಸಂಘಪರಿವಾರದ ದ್ವೇಷಪೂರಿತ ಪ್ರಚಾರದ ವಿರುದ್ಧ ಎಲ್ಲಾ ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಶಕ್ತಿಗಳು ಒಂದಾಗುವಂತೆ ಕರೆ ನೀಡುತ್ತೇವೆ” ಎಂದು ಸಾಮಾಜಿಕ ಮಾಧ್ಯದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸಾರ್ವಜನಿಕ ಸಭೆಯೊಂದರಲ್ಲಿ ಕಾಂಗ್ರೆಸ್ ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಗುರಿಯಾಗಿಸಿದ ವಾಗ್ದಾಳಿ ನಡೆಸಿದ್ದ ರಾಣೆ, ಕೇರಳದ ವಯನಾಡಿನಿಂದ ಸಹೋದರ-ಸಹೋದರಿಯನ್ನು ಸಂಸತ್ತಿಗೆ ಆಯ್ಕೆ ಮಾಡಲಾಗಿದೆ, ಏಕೆಂದರೆ ರಾಜ್ಯವು ʼಮಿನಿ ಪಾಕಿಸ್ತಾನʼ ಆಗಿದೆ ಎಂದು ಹೇಳಿದ್ದಾರೆ.

"ಕೇರಳವು ಮಿನಿ ಪಾಕಿಸ್ತಾನವಾಗಿದೆ, ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ, ನೀವು ಕೇಳಬಹುದು. ಅವರು ತಮ್ಮೊಂದಿಗೆ ಭಯೋತ್ಪಾದಕರನ್ನು ಕರೆದೊಯ್ದ ನಂತರ ಸಂಸದರಾಗಿದ್ದಾರೆ," ಎಂದು ರಾಣೆ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News