ಬ್ರಿಟನ್ ಚುನಾವಣೆಯಲ್ಲಿ ಲೇಬರ್ ಪಾರ್ಟಿಗೆ ಗೆಲುವು: ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ
Update: 2024-07-05 12:15 GMT
ಹೊಸದಿಲ್ಲಿ: ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೇಬರ್ ಪಾರ್ಟಿ ಮುಖಂಡ ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿದ್ದಾರೆ ಹಾಗೂ ಅವರೊಂದಿಗೆ ಸಕಾರಾತ್ಮಕ ಸಹಯೋಗವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
ನಿನ್ನೆಯ ಚುನಾವಣೆಯಲ್ಲಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷವನ್ನು ಲೇಬರ್ ಪಾರ್ಟಿ ಸೋಲಿಸಿದ ನಂತರ ಸುನಕ್ ಅವರ ಸ್ಥಾನದಲ್ಲಿ ಸ್ಟಾರ್ಮರ್ ಪ್ರಧಾನಿ ಹುದ್ದೆಗೇರಲಿದ್ದಾರೆ.
ಸುನಕ್ ಅವರ ಉತ್ತಮ ನಾಯಕತ್ವ ಹಾಗೂ ಅವರ ಆಡಳಿತದಲ್ಲಿ ಭಾರತ-ಬ್ರಿಟನ್ ಸಂಬಂಧ ವೃದ್ಧಿ ಕುರಿತೂ ಪ್ರಧಾನಿ ಮೋದಿ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿನ ಬೆನ್ನಲ್ಲೇ ರಿಷಿ ಸುನಕ್ ಅವರು ಇಂದು ಬಕಿಂಗ್‌ಹ್ಯಾಮ್ ಅರಮನೆಗೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.