"ಜನರ ಸುಧಾರಣೆಗೆ ಶ್ರಮಿಸಿದ ಗಣ್ಯ ನಾಯಕ": ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಹಿತ ಗಣ್ಯರ ಸಂತಾಪ

Update: 2024-12-26 23:30 IST
"ಜನರ ಸುಧಾರಣೆಗೆ ಶ್ರಮಿಸಿದ ಗಣ್ಯ ನಾಯಕ": ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಹಿತ ಗಣ್ಯರ ಸಂತಾಪ
  • whatsapp icon

ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, "ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡು ದುಃಖಿಸುತ್ತದೆ. ಹಣಕಾಸು ಸಚಿವರಾಗಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಧಾನಿಯಾಗಿ, ಜನರ ಜೀವನವನ್ನು ಸುಧಾರಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದಾರೆ." ಎಂದು ಹೇಳಿದ್ದಾರೆ.

ಮನಮೋಹನ್‌ ಸಿಂಗ್‌ ಅವರೊಂದಿಗಿನ ಒಡನಾಟದ ಫೋಟೊಗಳನ್ನು ಹಂಚಿರುವ ಪ್ರಧಾನಿ ಮೋದಿ, "ಅವರು ಪ್ರಧಾನಿಯಾಗಿದ್ದಾಗ ನಾನು ಗುಜರಾತ್ ಸಿಎಂ ಆಗಿದ್ದೆ. ಆ ವೇಳೆ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೆವು. ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಾವು ಚರ್ಚೆಗಳನ್ನು ನಡೆಸುತ್ತಿದ್ದೆವು" ಎಂದು ಬರೆದುಕೊಂಡಿದ್ದಾರೆ.

"ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ದುಃಖವಾಗಿದೆ. ಅವರು ಒಳ್ಳೆಯ ಮತ್ತು ತಾಳ್ಮೆಯ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ ಮತ್ತು ನಾನು ಗೌರವಿಸುವ ಸಹೋದ್ಯೋಗಿ. ಭಾರತದ ಆರ್ಥಿಕ ಭವಿಷ್ಯವನ್ನು ಬದಲಿಸಿದ ವ್ಯಕ್ತಿ" ಎಂದು ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ,ವಿರೋದ ಪಕ್ಷದ ನಾಯಕ ಆರ್‌. ಅಶೋಕ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News