ಅಬುಧಾಬಿ ಯುವರಾಜ ಖಾಲಿದ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್ ಖಾಲಿದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ಜೊತೆ ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಅಬುಧಾಬಿ ಯುವರಾಜ ಶೇಖ್ ಖಾಲಿದ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ.
ದಿಲ್ಲಿಯ ಹೈದರಾಬಾದ್ ಹೌಸ್ ನಲ್ಲಿ ಯುವರಾಜ ಶೇಖ್ ಖಾಲಿದ್‌ಗೆ ಪ್ರಧಾನಿ ನರೇಂದ್ರ ಮೋದಿಯವರು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ. ಭೇಟಿಯ ವೇಳೆ ಉಭಯ ದೇಶಗಳ ನಡುವಿನ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ ನಡೆಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ರವಿವಾರ ಹೊಸದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಯುವರಾಜ ಖಾಲಿದ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.
MEA Spokesperson Randhir Jaiswal tweets, "A warm welcome for a close friend. PM Narendra Modi received Sheikh Khaled bin Mohamed bin Zayed Al Nahyan, Crown Prince of Abu Dhabi at Hyderabad House."
— ANI (@ANI) September 9, 2024
(Pics: Randhir Jaiswal/X) pic.twitter.com/aKKHktKV37