ನಾಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ | ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
Update: 2024-12-27 05:58 GMT
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಜಕೀಯ ನಾಯಕರು ಶುಕ್ರವಾರ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಅವರ ಪತ್ನಿ ಗುರುಶರಣ್ ಕೌರ್ ಅವರನ್ನು ಭೇಟಿ ಮಾಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿದ ಹಲವಾರು ಕ್ರಾಂತಿಕಾರಕ ಸುಧಾರಣೆಗಳ ಶಿಲ್ಪಿ, ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯು ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.