ಬಿಹಾರ ರ್‍ಯಾಲಿ | ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಒಂದು ನಿಮಿಷ ಮೌನ ಆಚರಿಸುವಂತೆ ಜನರನ್ನು ಕೋರಿದ ಪ್ರಧಾನಿ ಮೋದಿ
Update: 2025-04-24 13:47 IST

ಪ್ರಧಾನಿ ನರೇಂದ್ರ ಮೋದಿ (PTI)
ಪಟ್ನಾ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 28 ಜನರ ಸ್ಮರಣಾರ್ಥ ಒಂದು ನಿಮಿಷ ಮೌನ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಹಾರ ರ್‍ಯಾಲಿಯಲ್ಲಿ ಜನರಿಗೆ ಕರೆ ನೀಡಿದ್ದಾರೆ.
ಬಿಹಾರದ ಮಧುಬನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಈ ದುಃಖದ ಕ್ಷಣದಲ್ಲಿ ನಾವೆಲ್ಲರೂ ಒಟ್ಟಾಗಿ ನಿಂತು ಪಹಲ್ಗಾಮ್ ದಾಳಿಯಲ್ಲಿ ಮಡಿದ ಅಮಾಯಕ ಜೀವಗಳನ್ನು ಗೌರವಿಸಲು ಒಂದು ನಿಮಿಷ ಮೌನ ಆಚರಿಸೋಣ" ಎಂದು ಹೇಳಿದರು.
ನಿಗದಿತಯಂತೆ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ಆ ಕಾರ್ಯಕ್ರಮ ರದ್ದುಗೊಳಿಸಿ ಬಿಹಾರಕ್ಕೆ ಪ್ರಯಾಣ ಬೆಳೆಸಿದರು.