ಸಂವಿಧಾನವನ್ನು ಉಲ್ಲಂಘಿಸುತ್ತಿರುವ ಪ್ರಧಾನಿ ಮೋದಿ, ಒಕ್ಕೂಟ ವ್ಯವಸ್ಥೆಯೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ: ಕಾಂಗ್ರೆಸ್ ವಾಗ್ದಾಳಿ

Update: 2024-03-31 09:09 GMT

ಜೈರಾಮ್ ರಮೇಶ್ | Photo: PTI 

ಹೊಸದಿಲ್ಲಿ: ಸಂವಿಧಾನವನ್ನು ಉಲ್ಲಂಘಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ವ್ಯವಸ್ಥೆಯೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ ಎಂದು ರವಿವಾರ ಕಾಂಗ್ರೆಸ್ ಆರೋಪಿಸಿದೆ.

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಹಾಗೂ ಪ್ರತಿಪಕ್ಷಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆಯನ್ನು ಖಂಡಿಸಿ ದಿಲ್ಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆಯುತ್ತಿರುವ ‘ಪ್ರಜಾತಂತ್ರ ಉಳಿಸಿ’ ಬೃಹತ್ ಸಮಾವೇಶವನ್ನುದ್ದೇಶಿಸಿ ಕಾಂಗ್ರೆಸ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತು.

ಪ್ರಧಾನಿ ನರೇಂದ್ರ ಮೋದಿಯು ಆರ್ಥಿಕ ಕೇಂದ್ರೀಕರಣ, ರಾಜ್ಯ ಸರಕಾರಗಳ ಕಾರ್ಯಕ್ರಮಗಳಿಗೆ ತಡೆ, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದು, ರಾಜ್ಯಪಾಲರ ದುರ್ಬಳಕೆ ಹಾಗೂ ರಾಜ್ಯಗಳ ಹಕ್ಕನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದೂ ಕಾಂಗ್ರೆಸ್ ಆರೋಪಿಸಿದೆ.

ರಾಮ್ ಲೀಲಾ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶವನ್ನುದ್ದೇಶಿಸಿ ಕಾಂಗ್ರೆಸ್ ಹೇಳಿಕೆಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿ ಹೇಗೆ ಅಕ್ಷರಶಃ ಹಾಗೂ ಸ್ವಪ್ರೇರಣೆಯಿಂದ ಸಂವಿಧಾನವನ್ನು ಉಲ್ಲಂಘಿಸುತ್ತಿದ್ದಾರೆ ಎಂಬುದನ್ನು ಸ್ಮರಿಸಬೇಕಿದೆ. ಭಾರತೀಯ ಸಂವಿಧಾನದ ವಿಧಿ 1ರ ಪ್ರಕಾರ, “ಇಂಡಿಯಾ ಅಂದರೆ ಭಾರತವು ರಾಜ್ಯಗಳ ಒಕ್ಕೂಟವಾಗಿರಲಿದೆ” ಎಂದು ಹೇಳಲಾಗಿದೆ ಎಂದು ಹೇಳಿದರು.

“2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ, ಸಹಕಾರ ಒಕ್ಕೂಟ ವ್ಯವಸ್ಥೆಯ ಬಗ್ಗೆ ದೊಡ್ಡ ಭರವಸೆಗಳನ್ನು ನೀಡಿದ್ದರು. ಆದರೆ, ಅವರು ಸಂಘರ್ಷಮಯ ಒಕ್ಕೂಟ ವ್ಯವಸ್ಥೆಯನ್ನು ಕೊಡುಗೆ ನೀಡಿದರು” ಎಂದು ಅವರು ವಾಗ್ದಾಳಿ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News