ಪ್ರತಿಯೊಂದನ್ನು ವೈಯುಕ್ತಿಕವಾಗಿ ತೆಗೆದುಕೊಳ್ಳುವ ಪ್ರಧಾನಿ: ಖರ್ಗೆ
Update: 2024-01-09 16:59 GMT
ಕಲಬುರಗಿ: ಭಾರತ-ಮಾಲ್ದೀವ್ಸ್ ರಾಜತಾಂತ್ರಿಕ ವಿವಾದದ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಂದನ್ನೂ ವೈಯುಕ್ತಿಕವಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಕಲುಬುರಗಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಪ್ರತಿಯೊಂದನ್ನೂ ವೈಯುಕ್ತಿಕವಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
‘‘ಅಂತರರಾಷ್ಟ್ರೀಯ ಮಟ್ಟದಲ್ಲಿ ನಾವು ನಮ್ಮ ನೆರೆ ಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳಬೇಕು. ನಾವು ಕಾಲಕ್ಕನುಗುಣವಾಗಿ ವರ್ತಿಸಬೇಕು. ನಾವು ನಮ್ಮ ನೆರೆಹೊರೆಯವರನ್ನು ಬದಲಾಯಿಸಲು ಸಾಧ್ಯವಿಲ್ಲ’’ ಎಂದು ಖರ್ಗೆ ತಿಳಿಸಿದ್ದಾರೆ.
ಮಾಲ್ದೀವ್ಸ್ನ ಸಂಪುಟ ಸಚಿವರು ಹಾಗೂ ಸರಕಾರಿ ಅಧಿಕಾರಿಗಳೊಂದಿಗೆ ಉಪ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಭೇಟಿಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದು ಭಾರೀ ಕೋಲಾಹಲಕ್ಕೆ ಕಾರಣವಾಗಿದೆ.