ಇಂಡಿಯಾ ಮೈತ್ರಿಕೂಟ ಸರಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ: ಅರವಿಂದ್ ಕೇಜ್ರಿವಾಲ್
Update: 2024-05-21 11:44 IST

ಅರವಿಂದ್ ಕೇಜ್ರಿವಾಲ್ | PC : PTI
ಹೊಸದಿಲ್ಲಿ: ಜೂನ್ 4ರಂದು 300 ಸ್ಥಾನಗಳಲ್ಲಿ ಜಯಿಸುವುದರೊಂದಿಗೆ ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಸರಕಾರ ರಚಿಸಲಿದೆ ಎಂದು ಸಮೀಕ್ಷೆಗಳನ್ನು ಉಲ್ಲೇಖಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಲೋಕಸಭಾ ಚುನಾವಣೆಯ ಐದನೆ ಹಂತದ ಮತದಾನ ಮುಕ್ತಾಯಗೊಂಡಿದೆ. ಚುನಾವಣೆಗಳು ನಡೆದಿರುವ ರೀತಿ ನೋಡಿದರೆ ಹಾಗೂ ಜೂನ್ 4 ಸಮೀಪಿಸುತ್ತಿರುವಾಗ ಬಿಜೆಪಿ ಪರಾಭವಗೊಳ್ಳಲಿದೆ ಎಂದು ನಾನು ಹೇಳಬಲ್ಲೆ” ಎಂದು ಅವರು ಹೇಳಿದ್ದಾರೆ.
ಸಮೀಕ್ಷೆಗಳ ಪ್ರಕಾರ, ಇಂಡಿಯಾ ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.